ಕನಿಗಾನಹಳ್ಳಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಜ್ಞಾನ ಚೈತನ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲಾ ಬ್ಯಾಗ್ ವಿತರಣೆ
ಶ್ರೀನಿವಾಸಪುರ:-ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ತಾಲೂಕಿನ ರೋಣೂರು ಹೋಬಳಿಯ ಕನಿಗಾನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಜ್ಞಾನ ಚೈತನ್ಯ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕ ನಿರ್ದೇಶಕರಾದ ನವೀನ್ ಕುಮಾರ್ ಬಿ. ಅವರು ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸಿದರು.
ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮೂಡಿಸುವುದು ಹಾಗೂ ಅಗತ್ಯವಿರುವ ಶೈಕ್ಷಣಿಕ ಪರಿಕರಗಳನ್ನು ಒದಗಿಸುವ ಮೂಲಕ ಅವರ ಕಲಿಕೆಗೆ ಉತ್ತೇಜನ ನೀಡುವುದು ಸಾಮಾಜಿಕ ಜವಾಬ್ದಾರಿಯ ಒಂದು ಭಾಗವಾಗಿದೆ. ಈ ನಿಟ್ಟಿನಲ್ಲಿ ಜ್ಞಾನ ಚೈತನ್ಯ ಚಾರಿಟೇಬಲ್ ಟ್ರಸ್ಟ್ ಕೈಗೊಂಡಿರುವ ಶೈಕ್ಷಣಿಕ ನೆರವಿನ ಕಾರ್ಯಕ್ಕೆ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಶಾಲಾ ಬ್ಯಾಗ್‌ಗಳನ್ನು ಸ್ವೀಕರಿಸಿದರು. ಮುಂದಿನ ದಿನಗಳಲ್ಲಿಯೂ ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯವಿರುವ ವಿದ್ಯಾರ್ಥಿಗಳಿಗೆ ನೆರವು ನೀಡುವ ಮೂಲಕ ಸಮಾಜಮುಖಿ ಚಟುವಟಿಕೆಗಳನ್ನು ಮುಂದುವರಿಸುವ ಆಶಯವನ್ನು ಟ್ರಸ್ಟ್‌ನ ಪದಾಧಿಕಾರಿಗಳು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್‌ನ “ಮಾಧ್ಯಮ ಸಹಭಾಗಿ ಚಿರಂಜೀವಿ ಎಂ. ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ಅವರು ಉಪಸ್ಥಿತರಿದ್ದರು.
ವರದಿ:-ವೆಂಕಟ್ ವಿನ್ ಪಬ್ಲ್ಲಿಕ್ ನ್ಯೂಸ್ ಕೋಲಾರ.