ಕೋಲಾರ ಸುದ್ದಿ
ದಿನಾಂಕ:-24.09.2026
ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ಅಂಗನವಾಡಿ ಶಿಕ್ಷಕರಿಗೆ ಸನ್ಮಾನ ಸಮಾರಂಭ
ರೋಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಶಿಕ್ಷಕರಿಗೆ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ವತಿಯಿಂದ ರೋಣೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ರೋಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿತ್ತು.
ಈ ಸಮಯದಲ್ಲಿ ಮಾತನಾಡಿದ ಭಾರತೀಯ ಜನತಾ ಪಾರ್ಟಿಯ ಶ್ರೀನಿವಾಸಪುರ ತಾಲ್ಲೂಕು ಅದ್ಯಕ್ಷ ರೋಣೂರು ಚಂದ್ರಶೇಖರ್ ನರೇಂದ್ರ ಮೋದಿಯವರು 25 ವರ್ಷ ಯಶಸ್ವಿಯಾಗಿ ಅಧಿಕಾರ ನಡೆಸಿದ್ದು ಅವರ ಹುಟ್ಟು ಹಬ್ಬದ ಪ್ರಯುಕ್ತ ಈ ಸನ್ಮಾನ ಸಮಾರಂಭವನ್ನು ಹಮ್ಮಿಕೊಂಡಿದ್ದು ಮಕ್ಕಳ ಪೌಷ್ಟಿಕತೆ, ಶಿಕ್ಷಣ ಹಾಗೂ ಆರೈಕೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಅಂಗನವಾಡಿ ಶಿಕ್ಷಕರು ಮಕ್ಕಳಿಗೆ ಎರಡನೇ ಗುರುಗಳು ಇದ್ದ ಹಾಗೆ ನೀವು ಮಕ್ಕಳಿಗೆ ಒಳ್ಳೆ ಶಿಕ್ಷಣ ನೀಡಿದರೆ ದೇಶವನ್ನು ಉನ್ನತ ಮಟ್ಟಕ್ಕೆ ಬೆಳೆಸಬಹುದು ನಿಮ್ಮನೆಲ್ಲಾ ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು ನಿಮ್ಮ ಸೇವೆ ಅಮೂಲ್ಯವಾದದ್ದು. ಈ ಕಾರ್ಯಕ್ರಮವು ಇಂದು ಮೊದಲು ರೋಣೂರು ಗ್ರಾಮ ಪಂಚಾಯಿತಿಯಿಂದ ಪ್ರಾರಂಭ ಮಾಡಿದ್ದು ಇಡಿ ತಾಲ್ಲೂಕಿನಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಸನ್ಮಾನ ಕಾರ್ಯಕ್ರಮ ನಡೆಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಈ ಹೋಬಳಿ ವ್ಯಾಪ್ತಿಯಲ್ಲಿ ರಂಗೋಲಿ ಸ್ಪರ್ದೆ ಸಾಂಸ್ಕೃತಿಕ ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಈ ಸಮಯದಲ್ಲಿ ರೋಣೂರು ಹಿರಿಯ ಪ್ರಾಥಮಿಕ ಮುಖ್ಯ ಶಿಕ್ಷಕರಾದ ಅಶೋಕ್ ಕುಮಾರ್,ಬಿ.ಎಲ್.ಓ ಸಾತಂಡ್ಲಹಳ್ಳಿ ನಾಗರಾಜ್,ರಘನಾಥ್ ರೆಡ್ಡಿ.ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನಾಗಭೂಷಣ್ ರೋಣೂರು ಗ್ರಾಮಸ್ಥರಾದ ರಮೇಶ್ ಹಾಗೂ ರೋಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಶಿಕ್ಷಕರು ಹಾಜರಿದ್ದರು.
ವರದಿ:-ವೆಂಕಟ್ ವಿನ್ ಪಬ್ಲಿಕ್ ಟಿ.ವಿ ಜಿಲ್ಲಾ ವರದಿಗಾರರು ಕೋಲಾರ



